Activities
ಹುಬ್ಬಳ್ಳಿ ನಗರ ತಾಲೂಕು 10ನೆಯ ಕನ್ನಡ ಸಾಹಿತ್ಯ ಸಮೇಳನ
"ಕರ್ನಾಟಕ ಬರೀ ನಾಡಲ್ಲ, ನಮ್ಮ ಸಂಸ್ಕೃತಿಯ ಧಾತು ಕನ್ನಡ ಕೇವಲ ನುಡಿಯಲ್ಲ, ನಮ್ಮಂತರಂಗದ ಮಾತು"
"ಕನ್ನಡ ಸಾಹಿತ್ಯ ಪರಿಷತ್ತು ಆಯೋಜಿಸುವ ಕನ್ನಡ ಸಾಹಿತ್ಯ ಸಮ್ಮೇಳನ ಕನ್ನಡಿಗರಿಗೆ, ಸಾಹಿತ್ಯ ಪ್ರೇಮಿಗಳಿಗೆ ಹಬ್ಬವೇ ಸರಿ. ಕನ್ನಡ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಅಭಿವೃದ್ಧಿಗೆ ಮೀಸಲಾದ ಅತಿದೊಡ್ಡ ಕಾರ್ಯಕ್ರಮವೇ ಕನ್ನಡ ಸಾಹಿತ್ಯ ಸಮ್ಮೇಳನ. ಕನ್ನಡಿಗರ ಐಕ್ಯತೆಯ ಪ್ರತೀಕವಾಗಿ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯುತ್ತಿದ್ದು, ಸಾಹಿತ್ಯಾಸಕ್ತರ, ಕವಿಗಳ, ಲೇಖಕರ, ಕಲಾವಿದರ ಮತ್ತು ಸಾಂಸ್ಕೃತಿಕ ಉತ್ಸಾಹಿಗಳ ಅತಿದೊಡ್ಡ ಸಮಾಗಮವಾಗಿದೆ".
"ಕನ್ನಡ ಸಾಹಿತ್ಯ ಸಮ್ಮೇಳನ ಕನ್ನಡ ಸಾಹಿತ್ಯ ಪರಿಷತ್ತಿನಿಂದ ೧೯೧೫ ರಿಂದ ನಡೆಸಿಕೊಂಡು ಬರುತ್ತಿರುವ ದೊಡ್ಡ ಪ್ರಮಾಣದ ಕನ್ನಡ ಸಮ್ಮೇಳನ. ಕರ್ನಾಟಕದ ಏಕೀಕರಣವನ್ನು ಸಾಧಿಸುವುದು ಮತ್ತು ಕನ್ನಡನಾಡಿನ ಬದುಕಿನಲ್ಲಿ ಕನ್ನಡವು ಸಾರ್ವಭೌಮ ಸ್ಥಾನವನ್ನು ಪಡೆದುಕೊಳ್ಳಲಗತ್ಯವಾದ ಜನಜಾಗೃತಿಯನ್ನೂ ಸಂಕಲ್ಪವನ್ನೂ ಹುಟ್ಟಿಸುವುದು ಈ ಸಮ್ಮೇಳನಗಳ ಉದ್ದೇಶ ಕನ್ನಡ ಸಾಹಿತ್ಯಕ್ಕೆ ಅವಿರತ ದುಡಿದ ಸಾಹಿತಿಗಳನ್ನು ಇದರ ಅಧ್ಯಕ್ಷತೆ ವಹಿಸಲು ಕೋರಿ ಗೌರವಿಸಲಾಗುತ್ತದೆ. ಈ ಹಿಂದೆ ಕನ್ನಡ ಸಾಹಿತ್ಯದ ಅನೇಕ ಗಣ್ಯರು, ಮಹಾಪುರುಷರು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದಾರೆ".